ಉಡುಪಿಯ ನಾಗಮಂಡಲ ಕಾರ್ಯಕ್ರಮದಲ್ಲಿ ನಡೆದ ಆ ಅನಿರೀಕ್ಷಿತ ಘಟನೆ ಏನಿತ್ತು?

ಕರಾವಳಿಯಲ್ಲಿ ಅತ್ಯಂತ ಶೃದ್ಧೆ ಭಕ್ತಿಯಿಂದ ಆಚರಿಸುವ ನಾಗಮಂಡಲ ಸೇವೆಗೂ ಚುನಾವಣೆಯ ಬಿಸಿತಟ್ಟಿದೆ. ಉಡುಪಿ ಜಿಲ್ಲೆಯ ಸಾಸ್ತಾನದಲ್ಲಿ ಸ್ಥಳೀಯ ಕುಟುಂಬಸ್ಥರು ಅದ್ದೂರಿಯಾಗಿ ನಾಗ ಮಂಡಲ ಸೇವೆ ಆಯೋಜನೆ ಮಾಡಿದ್ದರು. ಹತ್ತು ಸಾವಿರಕ್ಕೂ ಅಧಿಕ ಭಕ್ತಾದಿಗಳು ಸೇರಿದ್ದರು. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಧಾರ್ಮಿಕ ಕಾರ್ಯಕ್ರಮ ಆಯೋಜನೆಯಾಗಿತ್ತು. ಚುನಾವಣೆ ಘೋಷಣೆಯಾಗುವ ಮುನ್ನವೇ ಈ ನಾಗಮಂಡಲ ನಿಗದಿಯಾಗಿತ್ತು. ಯಾವುದೇ ಪೂರ್ವ ಸೂಚನೆ ನೀಡದೆ ಚುನಾವಣಾ ಅಧಿಕಾರಿಗಳ ನಾಗಮಂಡಲ ನಡೆಯುತ್ತಿದ್ದ ಪರಿಸರಕ್ಕೆ ಬಂದು ಪರವಾನಿಗೆ ಕೇಳಿದಾಗ ಗೊಂದಲದ ವಾತಾವರಣ ನಿರ್ಮಾಣವಾಯ್ತು.

ad

ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳಿಗೂ ಹೊಸದಾಗಿ ಪರವಾನಿಗೆ ಪಡೆಯುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಈ ಬಗ್ಗೆ ಮಾಹಿತಿ ಇರದ ನಾಗಮಂಡಲ ಆಯೋಜಕರು ಚುನಾವಣಾಧಿಕಾರಿಗಳ ಅನಿರೀಕ್ಷಿತ ಬೇಟಿಯಿಂದ ಕಕ್ಕಾಬಿಕ್ಕಿಯಾದರು. ಅಲ್ಲಿ ನೆರೆದಿದ್ದ ಭಕ್ತರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯರಿಗೂ ಚುನಾವಣಾಧಿಕಾರಿಗಳಿಗೂ ಮಾತಿನ ಚಕಮಕಿ ನಡೆಯಿತು. ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆಕ್ಷೇಪಿಸಿದ ಜನರು ಯಾವುದೇ ಕಾರಣಕ್ಕೂ ಚಟುವಟಿಕೆ ನಿಲ್ಲಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಕೊನೆಗೆ ಆಯೋಜಕರು ಅಲ್ಲಿ ಅಳವಡಿಸಿದ್ದ ಬ್ಯಾನರ್, ಬಂಟಿಗ್ಸ್ ಗಳನ್ನು ತೆರವು ಮಾಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ನಂತರ ನಾಗಮಂಡಲ ಸೇವೆ ಮುಂದುವರಿಯಿತು.