ಇಂದಿನಿಂದ ಪಿಯು ಪರೀಕ್ಷೆ. ಹೇಗಿದೆ ತಯಾರಿ.. ನೀವೇ ಓದಿ

ಇಂದಿನಿಂದ ದ್ವಿತೀಯ ಪಿಯುಸಿ ಎಕ್ಸಾಂ ಫೀವರ್ ಶುರುವಾಗಿದೆ​​. ರಾಜ್ಯದ ಒಂದು ಸಾವಿರದ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್​ 17ರವರೆಗೆ ಪರೀಕ್ಷೆಗಳು ನಡೆಯಲಿವೆ. 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಕ್ಸಾಂ ಬರೆಯಲಿದ್ದಾರೆ. ಮೊದಲ ದಿನ ಅರ್ಥಶಾಸ್ತ್ರ ಮತ್ತು ಭೌತ ವಿಜ್ಞಾನ ವಿಷಯದ ಪರೀಕ್ಷೆಗೆಳು ನಡೆಯಲಿವೆ. ಹಾಜರಾತಿ ಕೊರತೆಯಿಂದ ಬಾರಿ 3 ಸಾವಿರದ 700 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಇಲಾಖೆ ಅವಕಾಶ ನೀಡಿಲ್ಲ.

ad


 

ಇನ್ನು, ಈ ಬಾರಿ ಎಕ್ಸಾಂಗೆ ಪೂರಕವಾಗಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರಿ ಸಾರಿಗೆಯಿಂದ ಪಿಯು ವಿದ್ಯಾರ್ಥಿಗಳಿಗೆ ಬಂಪರ್ ಆಫರ್ ನೀಡಿದೆ. ಪರೀಕ್ಷೆ ಬರೆಯುವ ಯಾವುದೇ ವಿದ್ಯಾರ್ಥಿ ತನ್ನ ಹಾಲ್ ಟಿಕೆಟ್​ ತೋರಿಸಿದ್ರೆ ಬಸ್​ಗಳಲ್ಲಿ ಉಚಿತ ಪ್ರಯಾಣ ಬೆಳಸುವ ಸೌಲಭ್ಯ ಒದಗಿಸಿದೆ. ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುವ ಹಿನ್ನೆಲೆಯಲ್ಲಿ 286 ತಾಲೂಕು ಮಟ್ಟದ 32 ಜಿಲ್ಲಾಮಟ್ಟದ ಜಾಗೃತದಳನ್ನು ನಿಯೋಜಿಸಲಾಗಿದೆ. ಸುರಕ್ಷತೆ ದೃಷ್ಟಿಯಿಂದ ಪ್ರಶ್ನೆ ಪತ್ರಿಕೆ ರವಾನಿಸುವ ಎಲ್ಲಾ ವಾಹನಗಳಿಗೂ ಜಿಪಿಎಸ್​​ ಅಳವಡಿಸಲಾಗಿದೆ. ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿಲಾಗಿದೆ. ಇನ್ನು ಇದೇ ಮೊದಲ ಬಾರಿಗೆ ವಿಶೇಷ ಸಹಾಯವಾಣಿಯನ್ನು ಆರಂಭಿಸಲಾಗಿದೆ.