ಮತ್ತೆ ವೈದ್ಯರ ಮುಷ್ಕರ- ರೋಗಿಗಳ ಸ್ಥಿತಿ ಗಂಭೀರ!!

ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯ್ದೆ ತಿದ್ದುಪಡಿಗೆ ವಿರೋಧಿಸಿ ರಾಜ್ಯದಲ್ಲಿ ಮತ್ತೊಮ್ಮೆ ವೈದ್ಯರುಗಳು ಮುಷ್ಕರಕ್ಕೆ ಮುಂಧಾಗಿದ್ದಾರೆ. ನವೆಂಬರ್​ 3 ರಂದು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದ ವೈದ್ಯರು ಸರ್ಕಾರ ವಿಧೇಯಕ ಕೈಬಿಡದೇ ಇದ್ದಲ್ಲಿ ಹೋರಾಟ ಮುಂದುವರೆಸುವ ಎಚ್ಚರಿಕೆ ನೀಡಿದ್ದರು. ಇದೀಗ ಅಧಿವೇಶನದಲ್ಲಿ ವಿಧೇಯಕ ಮಂಡನೆಯಾಗಲಿದ್ದು, ಇದನ್ನು ವಿರೋಧಿಸಿ ರಾಜ್ಯದ ಖಾಸಗಿ ವೈದ್ಯರು ಬೆಳಗಾವಿಯ ಸುವರ್ಣಸೌಧದ ಎದುರು ಮುಷ್ಕರ ಆರಂಭಿಸಿದ್ದಾರೆ.

adರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿರುವ ಸಾವಿರಾರು ವೈದ್ಯರು ತಾರಿಹಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ನ್ಯಾಯಮೂರ್ತಿ ವಿಕ್ರಮಜೀ ಸೇನ್​ ಸಮಿತಿಯ ವರದಿಯನ್ನು ಯಥಾವತ್ತಾಗಿ ಆಳವಡಿಸಿಕೊಳ್ಳುವಂತೆ ಪ್ರತಿಭಟನಾ ನಿರತ ವೈದ್ಯರು ಒತ್ತಾಯಿಸಿದ್ದಾರೆ.
ಇದೇ ವೇಳೆ ಪ್ರತಿಭಟನೆಯಲ್ಲಿ ಮಾತನಾಡಿದ ಭಾರತೀಯ ವೈದ್ಯಕೀಯ ಸಂಘದ ರಾಜ್ಯಾದ್ಯಕ್ಷ ಎಚ್.ಎನ್.ರವೀಂದ್ರ, ಸರ್ಕಾರ ವೈದ್ಯರನ್ನು ಬೀದಿಗೆ ತಂದು ನಿಲ್ಲಿಸಿದೆ. ಸಿಎಂ ಸಿದ್ದರಾಮಯ್ಯ ತಕ್ಷಣ ಮಧ್ಯೆ ಪ್ರವೇಶಿಸಬೇಕು.ಕೇವಲ ವೈದ್ಯರಿಗಾಗಿಯೇ ಈ ಪ್ರತಿಭಟನೆಗಳು ನಡೆಯುತ್ತಿವೆ ಎಂದು ಬಿಂಬಿಸಲಾಗುತ್ತಿದೆ.

ಆದರೇ ವೈದ್ಯಕೀಯ ಸಂಸ್ಥೆಗಳನ್ನು ನಂಬಿಕೊಂಡಿರುವ ಹದಿನೈದು ಲಕ್ಷ ಕುಟುಂಬಗಳು ಬದುಕುತ್ತಿವೆ. ಸಿಎಂ ಸಿದ್ದರಾಮಯ್ಯನವರು ನಮ್ಮ ಮನವಿಗೆ ಸ್ಪಂಧಿಸುತ್ತಾರೆಂಬ ವಿಶ್ವಾಸವಿದೆ ಎಂದರು. ಇನ್ನು ರಾಜ್ಯದ ಎಲ್ಲೆಡೆ ವೈದ್ಯರು ಮುಷ್ಕರ ನಿರತರಾಗಿರೋದರಿಂದ ತುರ್ತು ಚಿಕಿತ್ಸೆ ಸಿಗದೆ ರೋಗಿಗಳು ಪರದಾಡುವ ಸ್ಥಿತಿ ಎದುರಾಗಿದೆ.