ಸದ್ಯದ ರಾಜಕೀಯ ಅಸ್ಥಿರತೆಗೆ ಯಾರು ಕಾರಣರು ಗೊತ್ತಾ? ಯಾರು ಆ ಸೂತ್ರದಾರ??

ಕರ್ನಾಟಕದ ರಾಜಕಾರಣವನ್ನ ಕಾಂಗ್ರೆಸ್ ಹೇಸಿಗೆಯ ತಾಣವಾಗಿ ಪರಿವರ್ತನೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ‌.ಸದಾನಂದ ಗೌಡ ಹೇಳಿದ್ದಾರೆ..ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವ್ರು, ಇಡೀ ರಾಜ್ಯದ ರಾಜಕಾರಣ ಸದ್ಯ ನಗೆಪಾಟಲಿಗೆ ಈಡಾಗಿಸಿದೆ..ಏಡಿಗಳನ್ನ ತಟ್ಟೆಯಲ್ಲಿ ಹಾಕಿದ್ರೆ ಯಾವ ರೀತಿ ಪರಸ್ಪರ ಕೈ-ಕಾಲು ಎಳೆಯುತ್ತವೆಯೋ, ಆ ರೀತಿಯಲ್ಲಿ ಕಾಂಗ್ರೆಸ್ ಕಚ್ಚಾಟವಿದೆ.

ad

ಕುಮಾರಸ್ವಾಮಿ ಸಿಎಂ ಆಗಿ ಕೆಲಸ ಮಾಡಲಾಗ್ತಿಲ್ಲ, ಸಿದ್ದರಾಮಯ್ಯ ಕೆಲಸ ಮಾಡಲು ಬಿಡ್ತಿಲ್ಲ..ಈ ಎಲ್ಲಾ ನಾಟಕದ ಹಿಂದೆ ಸಿದ್ದರಾಮಯ್ಯರ ಪೂರ್ತಿ ಕೈವಾಡವಿದೆ ಎಂದ್ರು..ಇನ್ನು ಸಿದ್ದರಾಮಯ್ಯರೇ ತನ್ನ ಹಿಂಬಾಲಕರನ್ನ ಬಿಟ್ಟು ಸರ್ಕಾರ ಅಸ್ಥಿರಗೊಳಿಸೋ ಪ್ರಯತ್ನ ಮಾಡ್ತಿದಾರೆ..

ಒಂದು ಕಡೆಯಿಂದ ಸಮಾಧಾನ ಮಾಡುವ ನಾಟಕ, ಮತ್ತೊಂದೆಡೆ ಒಳಗಿಂದೊಳಗೆ ಬೆಂಕಿ ಹಚ್ಚುವ ಕೆಲಸ ಮಾಡ್ತಿದಾರೆ..ಆದ್ರೆ ಭಾರತೀಯ ಜನತಾ ಪಾರ್ಟಿ ಈ ವಿಚಾರದಲ್ಲಿ ಸ್ಪಷ್ಟವಾಗಿದೆ. ಇವರ ನಾಟಕಗಳು, ಕುಮಾರಸ್ವಾಮಿ ಏನು ಮಾಡ್ತಿದ್ದಾರೆ ಅನ್ನೋದೇ ಗೊತ್ತಿಲ್ಲದೇ ರಾಜ್ಯ ಅಸ್ಥಿರತೆಯ ಪರಾಕಾಷ್ಠೆಯನ್ನ ಮುಟ್ಟಿದೆ.

 

ಇದರಲ್ಲಿ ಸಿದ್ದರಾಮಯ್ಯರೇ ಪಾತ್ರಧಾರಿ, ಅವರೇ ಎಲ್ಲಾ ಆಡಿಸುತ್ತಿರುವುದು. ಆದ್ರೆ ಸುಮ್ಮನೆ ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಸಿಂಗಲ್ ಲಾರ್ಜೆಸ್ಟ್ ಪಾರ್ಟಿಯಾಗಿ ಜನರಿಗೆ ಆಗ್ತಿರೋ ಅನ್ಯಾಯವನ್ನು ನಮಗೆ ನೋಡಲಿಕ್ಕೆ ಆಗಲ್ಲ. ಅಧಿಕಾರ ಮಾಡಲು ಆಗದೇ ಇದ್ರೆ ಬಿಟ್ಟು ಬಿಡಿ. ಕಾಂಗ್ರೆಸ್ ಜೊತೆ ಇರಲಿಕ್ಕೆ ಆಗದೇ ಇದ್ರೆ ಶಾಸಕರು ರಾಜೀನಾಮೆ ಕೊಡಿ. ಸುಮ್ಮನೇ ಈ ದೊಂಬರಾಟದಿಂದ ರಾಜ್ಯದ ಹಿತಾಸಕ್ತಿ ಬಲಿಕೊಡಬೇಡಿ ಎಂದಿದ್ದಾರೆ…