ಇಂದು ದೇಶಾದ್ಯಂತ ಪಲ್ಸ್​​ ಪೋಲಿಯೋ ಲಸಿಕೆ: ಬೆಂಗಳೂರಿನಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ HDK

 

ಇಂದು ದೇಶಾದ್ಯಂತ ಪಲ್ಸ್​​ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು. ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಸಿಎಂ ಕುಮಾರಸ್ವಾಮಿ ಗೃಹ ಕಚೇರಿ ಕೃಷ್ಣಾದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.

 

ಪೋಲಿಯೋ ನಿರ್ಮೂಲನೆ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ರಾಷ್ಟ್ರೀಯ ಪಲ್ಸ್​​ ಪೋಲಿಯೋ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಡಿಸೆಂಬರ್​ ಮತ್ತು ಫೆಬ್ರವರಿ ತಿಂಗಳಲ್ಲಿ ಒಟ್ಟು ಎರಡು ಹಂತಗಳಲ್ಲಿ ಲಸಿಕೆ ಹಾಕಲಾಗುತ್ತದೆ. ಈ ಬಾರಿ ಕಾರಣಾಂತರಗಳಿಂದ ಪಲ್ಸ್​ ಪೋಲಿಯೋ ಕಾರ್ಯಕ್ರಮ ಮುಂದೂಡಲ್ಪಟ್ಟಿತು. ಪಲ್ಸ್​​ ಪೋಲಿಯೋ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗೆ ಪೋಲಿಯೋ ಸೋಂಕು ತಗುಲಿದರೆ ಪಾಶ್ವವಾಯು, ಅಂಗವಿಕಲತೆಯೊಂದಿಗೆ ಅನೇಕ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲದೇ ಸಾವು ಕೂಡ ಸಂಭವಿಸಬಹುದು. ಹೀಗಾಗಿ ಪೋಷಕರು ಈ ಮಾರಕ ರೋಗವನ್ನು ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮವಾಗಿ ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು.

 

ಭಾರತವನ್ನು ಪೋಲಿಯೋ ಮುಕ್ತವನ್ನಾಗಿಸಲು 1994 ರಲ್ಲಿ ಪ್ರಾರಂಭವಾದ ಈ ಪಲ್ಸ್ ಪೋಲಿಯೋ ಯೋಜನೆಯಿಂದಾಗಿ ದೇಶದಲ್ಲಿ ಸಾಕಷ್ಟು ಪ್ರಗತಿ ಕಂಡು ಬಂದಿದೆ. ಕಳೆದ 7 ವರ್ಷಗಳಿಂದ ಇಲ್ಲಿಯವರೆಗೆ ಯಾವುದೇ ಪೋಲೀಯೋ ಪ್ರಕರಣಗಳು ವರದಿಯಾಗಿಲ್ಲ ಎನ್ನಲಾಗಿದ್ದು, ಭಾರತ ಸಹ ಪೊಲೀಯೋ ಮುಕ್ತ ರಾಷ್ಟ್ರವಾಗಿದೆ.  ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಆಯೋಜಿಸಲಾಗುತ್ತದೆ.