ಪಕ್ಷವಿರೋಧಿ ಚಟುವಟಿಕೆಗೆ ತಲೆದಂಡ! ಕಾಂಗ್ರೆಸ್​​ನಿಂದ ರೋಷನ್​ ಬೇಗ್​ ಅಮಾನತ್ತು!!

ಕಾಂಗ್ರೆಸ್​ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದನ್ನು ಬಹಿರಂಗವಾಗಿ ಹೇಳಿದ್ದಕ್ಕೆ ಕೊನೆಗೂ ಮಾಜಿ ಸಚಿವ ಹಾಗೂ ಹಾಲಿ ಶಿವಾಜಿನಗರ ಶಾಸಕ ರೋಷನ್ ಬೇಗ್ ತಲೆದಂಡವಾಗಿದೆ. ಕಾಂಗ್ರೆಸ್​ ಪಕ್ಷ ಹಾಗೂ ಹಿರಿಯ ನಾಯಕರ ವಿರುದ್ಧ ಬಹಿರಂಗವಾಗಿ ಮಾತನಾಡಿದ ಕಾರಣಕ್ಕೆ ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿರುವ ಕಾಂಗ್ರೆಸ್​ ರೋಷನ್​ ಬೇಗ್​ರನ್ನು ಪಕ್ಷದಿಂದ ಅಮಾನತ್ತು ಮಾಡಿ ಆದೇಶ ಹೊರಡಿಸಿದೆ.

ad


ಲೋಕಸಭೆ ಚುನಾವಣೆ ಸೋಲಿನ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ರೋಷನ್ ಬೇಗ್, ಮಾಜಿಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿರುದ್ಧ ಟೀಕಿಸಿದ್ದರು. ಸಿದ್ಧರಾಮಯ್ಯನವರಿಂದಲೇ ಕಾಂಗ್ರೆಸ್​ ಅವನತಿಗೆ ತಲುಪಿದೆ ಎಂದಿದ್ದರು.


ಈ ಹಿನ್ನೆಲೆಯಲ್ಲಿ ರೋಷನ್ ಬೇಗ್​ ವಿರುದ್ಧ ಶಿಸ್ತುಕ್ರಮಕ್ಕೆ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದು, ದೂರಿನ ವಿಚಾರಣೆ ನಡೆಸಿದ ಕೆಪಿಸಿಸಿ, ರೋಷನ್ ಬೇಗ್​ ಅವರನ್ನು ಪಕ್ಷದಿಂದ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದೆ. ರೋಷನ್ ಬೇಗ್​ ವಿರುದ್ಧ ಕಾಂಗ್ರೆಸ್ ಕೈಗೊಂಡಿರುವ ಶಿಸ್ತುಕ್ರಮ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಪಕ್ಷದ ಈ ಕ್ರಮಕ್ಕೆ ರೋಷನ್ ಬೇಗ್ ಪ್ರತಿಕ್ರಿಯಿಸುತ್ತಾರೆ ಕಾದು ನೋಡಬೇಕಿದೆ.