ಲೋಕಸಭೆ ಫಲಿತಾಂಶಕ್ಕೂ ಮುನ್ನವೇ ಕಮಲ ಪಾಳಯದ ಗೆಲುವಿನ ಲೆಕ್ಕಾಚಾರ! ಬಿಜೆಪಿ ಎಷ್ಟು ಕ್ಷೇತ್ರಗಳಲ್ಲಿ ಗೆಲ್ಲಲಿದೆ ಗೊತ್ತಾ?!

ಲೋಕಸಭಾ ಚುನಾವಣೆಗೆ ಎರಡು ಹಂತದ ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ, ರಾಜ್ಯ ಬಿಜೆಪಿ ಗೆಲುವಿನ ಲೆಕ್ಕಾಚಾರ ಆರಂಭಿಸಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 21 ಸೀಟ್​ ಗೆಲ್ಲಲಿದೆ ಎಂದು ಈಗಾಗಲೇ ಬಿಜೆಪಿ ತೀರ್ಮಾನಿಸಿದ್ದು, ಈ ಬಗ್ಗೆ ಹೈಕಮಾಂಡ್​ಗೂ ವರದಿ ರವಾನಿಸಿದೆ.

ad

ಇಂದು ನಗರದ ಮಲ್ಲೇಶ್ವರಂನಲ್ಲಿರುವ ರಾಜ್ಯ ಕಚೇರಿಯಲ್ಲಿ ಸಿಕ್ರೆಟ್​ ಸಭೆ ನಡೆಸಿದ ನಾಯಕರು ರಾಜ್ಯದ ಒಟ್ಟು 28 ಕ್ಷೇತ್ರಗಳ ಪೈಕಿ ಬಿಜೆಪಿ ಗೆಲ್ಲುವ ಕ್ಷೇತ್ರಗಳನ್ನು ಪಟ್ಟಿ ಮಾಡಿದ್ದು, ಅದರಲ್ಲಿ ಒಟ್ಟು 21 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವನ್ನು ಎಲ್ಲ ನಾಯಕರು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಈ ಬಗ್ಗೆ ವರದಿ ಸಿದ್ದಪಡಿಸಿದ ಬಿಜೆಪಿಗರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾಗೆ ವರದಿ ರವಾನಿಸಿದ್ದಾರೆ.

ಬಿಜೆಪಿಯ ಸಮೀಕ್ಷೆಗಳ ಪ್ರಕಾರ ಕಳೆದ ಬಾರಿಗಿಂತ ಹೆಚ್ಚುವರಿ 4 ಕ್ಷೇತ್ರಗಳು ತಮ್ಮದಾಗಲಿದೆ ಅಂತಾ ರಾಜ್ಯ ಬಿಜೆಪಿ ರಿಪೋರ್ಟ್​ ಸಿದ್ಧಪಡಿಸಿದೆ. ಕಳೆದ ಚುನಾವಣೆಯಲ್ಲಿ ರಾಜ್ಯದ 17 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿತ್ತು. ಈ ಬಾರಿ 17ರ ಜೊತೆಗೆ ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಕಲಬುರಗಿ ಕ್ಷೇತ್ರಗಳಲ್ಲೂ ಗೆಲ್ಲಲಿದ್ದೇವೆ ಅಂತಾ ರಾಜ್ಯ ಕೋರ್​ ಕಮಿಟಿ ರಾಷ್ಟ್ರೀಯ ಅಧ್ಯಕ್ಷರಿಗೆ ವರದಿ ಸಲ್ಲಿಸಿದೆ. ಬಿಜೆಪಿಯ ಈ ವರದಿ ಎಷ್ಟರ ಮಟ್ಟಿಗೆ ನಿಜವಾಗಲಿದೆ ಎಂಬುದನ್ನು ಮೇ 23 ರಂದೇ ನೋಡಬೇಕಿದೆ.