ನಟಿ ರಾಧಿಕಾ ಕುಮಾರಸ್ವಾಮಿ ಪಿತೃವಿಯೋಗ..!

3229

ಸ್ಯಾಂಡಲ್​ವುಡ್​ನ ನಟಿ,ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಅವರ ತಂದೆ ದೇವರಾಜ್ ಅನಾರೋಗ್ಯದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಕೆಲದಿನಗಳಿಂದ ಕಿಡ್ನಿ ಸಮಸ್ಯೆ ಹಾಗೂ ಜ್ವರ ಬಳಲುತ್ತಿದ್ದ ಅವರು, ಕಳೆದ ನಾಲ್ಕು ದಿನಗಳಿಂದ ಮಂಗಳೂರಿನ ಸೋಲೆತ್ತೂರು ಗ್ರಾಮ ಹಬ್ಬ ದಲ್ಲಿ ಪಾಲ್ಗೊಂಡಿದ್ದರು‌.

ad

ಈ ವೇಳೆ ದೇವರಾಜ್ ಅವರಿಗೆ ಕಫದ ಸಮಸ್ಯೆ ಹೆಚ್ಚಾಗಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಆದ್ರೆ ಅವರು ಚಿಕಿತ್ಸೆಗೆ ಸ್ಪಂದಿಸದ ಕಾರಣ ಬೆಂಗಳೂರಿನ ಎನ್​ಯು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗ್ತಿತ್ತು.

ಆದ್ರೆ ಚಿಕಿತ್ಸೆಗೆ ಸ್ಪಂದಿಸದೆ ದೇವರಾಜ್ ಅವರು ಇಂದು ಬೆಳಗ್ಗೆ 9.25ಕ್ಕೆ ಕೊನೆಯುಸಿರೆಳೆದಿದ್ದಾರೆ.  ಅವರ ಪಾರ್ಥಿವ ಶರೀರವನ್ನು ಇಂದು ಮಂಗಳೂರಿನ ಸ್ವಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗುತ್ತಿದ್ದು, ನಾಳೆ ಅಂತ್ಯ ಸಂಸ್ಕಾರ ನಡೆಯಲಿದೆ.


ಚಿತ್ರರಂಗದ ಹಲವು ಗಣ್ಯರು ರಾಧಿಕಾ ತಂದೆ ದೇವರಾಜ್ ಅಂತಿಮ ದರ್ಶನ ಪಡೆಯಲಿದ್ದಾರೆ‌. ಹಲವರು ಸಾಮಾಜಿಕ ಜಾಲತಾಣಗಳ ಮೂಲಕ ನಟಿ ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಕುಟುಂಬಕ್ಕೆ ಸಂತಾಪ ಕೋರಿದ್ದಾರೆ‌.

 

 

Sponsored :

Related Articles