2028 ರಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​​ ರಾಜ್ಯದ ಸಿಎಂ! ರಾಜಕೀಯದಲ್ಲಿ ಸಂಚಲನ ಮೂಡಿಸಿದೆ ಸ್ವಾಮೀಜಿ ಭವಿಷ್ಯ!!

4240
9900071610

ಬೆಳಗಾವಿ ರಾಜಕಾರಣದಲ್ಲಿ ತಮ್ಮದೇ ಆದ ವಿಶಿಷ್ಟ ಸಾಧನೆಗಳ ಮೂಲಕ ಗುರುತಿಸಿಕೊಂಡ ಪ್ರಭಾವಿ ಮಹಿಳಾ ರಾಜಕಾರಣಿ ಲಕ್ಷ್ಮೀ ಹೆಬ್ಬಾಳ್ಕರ್​​. ರಾಜಕೀಯವಾಗಿ ಮುಂದಿನ ದಿನಗಳಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ ಅವರಿಗೆ ಒಳ್ಳೆಯ ಭವಿಷ್ಯವಿದೆ ಅನ್ನೋ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ, ಲಕ್ಷ್ಮೀ ಹೆಬ್ಬಾಳ್ಕರ್​ 2028 ರಲ್ಲಿ ಸಿಎಂ ಆಗಲಿದ್ದಾರೆ ಎಂಬ ಭವಿಷ್ಯವಾಣಿ ಕೇಳಿಬಂದಿದೆ.

ad

ಹೌದು ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ 2028 ರಲ್ಲಿ ಈ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ನಿನ್ನೆ ಬೆಳಗಾವಿಯಲ್ಲಿ ನಡೆದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ ಲಕ್ಷ್ಮೀ ಈ ರಾಜ್ಯದ ಮೊದಲ ಮಹಿಳಾ ಸಿಎಂ ಎಂಬ ಭವಿಷ್ಯ ನುಡಿದು ಅಚ್ಚರಿ ಮೂಡಿಸಿದ್ದಾರೆ.


ಮೊದಲ ಬಾರಿಗೆ ಶಾಸಕಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್​ ಜನ್ಮದಿನ ಫೆಬ್ರವರಿ 14. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೇ 12 ರಂದು ರಿಸಲ್ಟ್​​ ಘೋಷಣೆಯಾಗಿ ಲಕ್ಷ್ಮೀ ಹೆಬ್ಬಾಳ್ಕರ್​ ಶಾಸಕಿಯಾಗಿ ಆಯ್ಕೆಯಾಗಿದ್ದರಿಂದ, ಜನರು ತಮಗೆ ರಾಜಕೀಯವಾಗಿ ಮರುಜನ್ಮ ನೀಡಿದ ಈ ದಿನವನ್ನೇ ಲಕ್ಷ್ಮೀಯವರು ತಮ್ಮ ಹುಟ್ಟುಹಬ್ಬವಾಗಿ ಆಚರಿಸಿಕೊಳ್ಳುತ್ತಿದ್ದಾರೆ.

ಹೀಗಾಗಿ ನಿನ್ನೆ ಲಕ್ಷ್ಮೀ ಹೆಬ್ಬಾಳ್ಕರ್​ ಬೆಳಗಾವಿಯಲ್ಲಿ ಸಾಧಕರನ್ನು ಸನ್ಮಾನಿಸುವ ಮೂಲಕ ವಿನೂತನವಾಗಿ ಹುಟ್ಟುಹಬ್ಬ ಆಚರಿಸಿದ್ರು. ಈ ವೇಳೆ ಸಮಾರಂಭದಲ್ಲಿ ಭಾಗಿಯಾಗಿದ್ದ ಸ್ವಾಮೀಜಿ ಭವಿಷ್ಯ ನುಡಿದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ.

Sponsored :


9900071610