ಅಲ್ಪಸಂಖ್ಯಾತರನ್ನು ಡಿಸಿಎಂ ಮಾಡಿ- ರಾಹುಲ್​ ಮೇಲೆ ಒತ್ತಡ ಹೇರಿದ್ಯಾರು ಗೊತ್ತಾ!?

981

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ ಸಚಿವ ಸ್ಥಾನ ಹಾಗೂ ಡಿಸಿಎಂ ಸ್ಥಾನಕ್ಕೆ ಲಾಭಿ ಜೋರಾಗಿದೆ. ಅಲ್ಪಸಂಖ್ಯಾತ ಮುಸ್ಲಿಂರಿಗೆ ಡಿಸಿಎಂ ಹಾಗೂ ಸಚಿವರ ಹುದ್ದೆ ನೀಡಬೇಕು ಎಂದು ಒತ್ತಾಯಿಸಿ . ಚಿಕ್ಕೋಡಿ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್​ ಗಾಂಧಿಗೆ ಮನವಿ ಮತ್ರ ಸಲ್ಲಿಸಿದ್ದಾರೆ.

ad

 

ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಮಾತನಾಡಿದ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಶಹಾಜಾನ ಡೊಂಗರಗಾವ, ಕುಮಾರಸ್ವಾಮಿ ನೇತೃತ್ವದಲ್ಲಿ ಸರ್ಕಾರ ರಚನೆಯಾಗುತ್ತಿದೆ ಕುಮಾರಸ್ವಾಮಿ ಅವರೆ ಹೇಳಿಕೆ ನೀಡಿದ್ದರು. ಮುಸ್ಲಿಂರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುತ್ತವೆ ಎಂದಿದ್ದರು ಹಾಗಾಗಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು. ಕಾಂಗ್ರೆಸ್ ಗೆಲುವಿಗೆ ಅಲ್ಪಸಂಖ್ಯಾತರ ಕೊಡುಗೆ ತುಂಬಾ ಇದೆ ನಮ್ಮ ಸಮುದಾಯ ಕಾಂಗ್ರೆಸ್ ಪಕ್ಷಕ್ಕಾಗಿ ಬಹಳ ಹೋರಾಟ ನಡೆಸಿದೆ ರಾಜ್ಯದಲ್ಲಿ 60 ಕ್ಕು ಹೆಚ್ಚು ಸ್ಥಾನ ಗೆಲ್ಲಲು ಮುಸ್ಲಿಂ ಮತದಾರರು ನಿರ್ಣಾಯಕರಾಗಿದ್ದಾರೆ ಎಂದ್ರು. ಒಟ್ಟಿನಲ್ಲಿ ರಾಜ್ಯದಲ್ಲಿ ಡಿಸಿಎಂ ಸ್ಥಾನಕ್ಕೆ ಜಾತಿ-ಮತದಲ್ಲಿ ಲೆಕ್ಕಾಚಾರ ಆರಂಭವಾಗಿದ್ದು, ಒತ್ತಡ ಹೆಚ್ಚತೊಡಗಿದೆ.

 

Sponsored :

Related Articles