ಹುಬ್ಬಳ್ಳಿಯನ್ನು ಪಾಕಿಸ್ತಾನ ಎಂದ ಮೌಲ್ವಿ ವಿರುದ್ಧ ದೂರು ದಾಖಲು!!

354
Police Registered Case Against Molvi's Treason Statement.

ನಿನ್ನೆ ಹುಬ್ಬಳ್ಳಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಮೌಲ್ವಿ ವಿರುದ್ಧ ಕೊನೆಗೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹುಬ್ಬಳ್ಳಿಯ ಗಣೇಶ್ ಪೇಟೆಯಲ್ಲಿ ನಿನ್ನೆ ನಡೆದ ಈದ್ ಮಿಲಾದ್ ಹಬ್ಬದ ವೇಳೆ ಗಣೇಶ ಪೇಟೆಯ ಮಜೀದ ಮುತವಲಿ ಅಬ್ದುಲ್ ಹಮೀದ್ ಖೈರಾತಿ ಎನ್ನುವ ಮೌಲ್ವಿ ಗಣೇಶ್ ಪೇಟೆ ನನಗೆ ಪಾಕಿಸ್ತಾನದ ಹಾಗೇ ಕಾಣುತ್ತಿದೆ, ಪಾಕಿಸ್ತಾನಕ್ಕೆ ಹೋಗಿ ನೋಡುವ ಅವಶ್ಯಕತೆ ಇಲ್ಲ.

ad

ಇಲ್ಲಿಯೇ ಪಾಕಿಸ್ತಾನ ನಿರ್ಮಾಣವಾಗಿದೆ, ನಾವು ಒಗ್ಗಟ್ಟಿನಿಂದ ಹಾಗೂ ಎದೆ ಸೆಟೆದು ನಡೆದರೆ ನಮ್ಮ ತಂಟೆಗೆ ಯಾರೂ ಬರುವುದಿಲ್ಲ ಎಂದು ಹೇಳಿದ್ದರು. ಈ ಹೇಳಿಕೆ ಸಾಮಾಜಿಕ ಜಾಲತಾಣ ಸೇರಿದೆ ಎಲ್ಲೆಡೆ ವೈರಲ್ ಆಗಿದ್ದು, ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು
ಅಲ್ಲದೇ ಈ ರೀತಿ ಸಾಮಾಜಿಕ ಸ್ವಾಸ್ಥ್ಯ ಕದಡುವ ಪ್ರಕರಣಗಳು ನಡೆದಿದ್ದರೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ ಎಂಬ ಕಾರಣಕ್ಕೆ ಪೊಲೀಸರ ವಿರುದ್ಧವೂ ಟೀಕೆ ವ್ಯಕ್ತವಾಗಿತ್ತು. ಇದೀಗ ಎಚ್ಚೆತ್ತುಕೊಂಡಿರುವ ಹುಬ್ಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹುಬ್ಬಳ್ಳಿ ಶಹರ್ ಠಾಣೆ ಎಸಿಪಿ ದಾವೂದ್ ಖಾನ್ ಪ್ರಕರಣ ದಾಖಲಿಸಿಕೊಂಡಿದ್ದು, ದೇಶ ದ್ರೋಹ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.

 

Sponsored :

Related Articles