ಬಸವಣ್ಣನವರ ಅಭಿಮಾನಿಗಳಿಗೆ ಶಾಕ್​​! ಐಕ್ಯ ಮಂಟಪದಲ್ಲಿ ಕಾಣಿಸಿಕೊಂಡ ಬಿರುಕು!!

361

ರಾಜ್ಯದಾದ್ಯಂತ ಇರುವ ಬಸವಣ್ಣನ ಭಕ್ತರಿಗೆ ಶಾಕಿಂಗ್ ನ್ಯೂಸ್ ಎದುರಾಗಿದೆ. ಹೌದು ಬಸವಣ್ಣನವರ ಐಕ್ಯ ಮಂಟಪವಾಗಿರುವ ಕೂಡಲಸಂಗಮದ ಬಾವಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.

ad

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿರುವ ಬಸವಣ್ಣನವರ ಐಕ್ಯ ಮಂಟಪದ ಬಾವಿಯಲ್ಲಿ ಭಾರೀ ಬಿರುಕು ಕಾಣಿಸಿಕೊಂಡಿದೆ. ಸೂಕ್ತ ನಿರ್ವಹಣೆಯ ಕೊರತೆಯಿಂದ ಈ ಸ್ಥಿತಿ ಎದುರಾಗಿದೆ ಎಂಬ ಆರೋಪ ಕೂಡ ಕೇಳಿಬಂದಿದೆ.
ಸಧ್ಯ ಪ್ರವಾಸಿಗರಿಗೆ ಹಾಗೂ ಭಕ್ತರಿಗೆ ಐಕ್ಯ ಮಂಟಪಕ್ಕೆ ಪ್ರವೇಶ ನಿರಾಕರಿಸಲಾಗಿದೆ. ಕೂಡಲಸಂಗಮ ಅಭಿವೃದ್ಧಿ ಮಂಡಳಿ ವಿಶೇಷ ಅಧಿಕಾರಿ ಆದೇಶ ಹೊರಡಿಸಿದ್ದಾರೆ. ಕೃಷ್ಣಾ ಮತ್ತು ಮಲಪ್ರಭಾ ನದಿ ಸಂಗಮದ ಸ್ಥಳದಲ್ಲಿ ಇರೋ ಬಸವಣ್ಣನ ಐಕ್ಯ ಮಂಟಪವನ್ನು 1978 ರಲ್ಲಿ ನಿರ್ಮಿಸಲಾಗಿತ್ತು.


ಬಳಿಕ 1998 ರಲ್ಲಿ ಅಂದಿನ ಜೆ.ಎಚ್.ಪಟೇಲ್ ಸರ್ಕಾರ ಕೂಡಲಸಂಗಮ ಅಭಿವೃದ್ಧಿಗೆ ಬಿಡುಗಡೆ ಮಾಡಿತ್ತು 34 ಕೋಟಿ ರೂ.‌ಅನುದಾನ ಬಿಡುಗಡೆ ಮಾಡಿತ್ತು. ಆಗ ಕೂಡಲಸಂಗಮ ಅಭಿವೃದ್ಧಿ ಮಂಡಳಿ ವಿಶೇಷ ಅಧಿಕಾರಿ ಆಗಿದ್ದ ಶಿವಾನಂದ ಜಾಮದಾರ ಅಧಿಕಾರದಲ್ಲಿ ಐಕ್ಯ ಮಂಟಪವನ್ನು ಅಭಿವೃದ್ದಿ ಪಡಿಸಲಾಗಿತ್ತು.

ಆದರೆ ಸೇತುವೆ ನಿರ್ಮಾಣ, ಆಧುನಿಕರಣ,ನಂತರದಲ್ಲಿ ಐಕ್ಯ ಮಂಟಪ ನಿರ್ವಹಣೆಯಲ್ಲಿ ಪ್ರಾಧಿಕಾರ ನಿರ್ಲಕ್ಷ್ಯ ತೋರಿದೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ಐಕ್ಯ ಮಂಟಪದಲ್ಲಿ ನೀರು ಬಸಿದು ಬಾವಿಯ ಗೋಡೆಯಲ್ಲಿ ಬಿರುಕು ಮೂಡಿದೆ ಎನ್ನಲಾಗಿದೆ.

Sponsored :

Related Articles