ಸಿದ್ದು-ಎಚ್ಡಿಕೆ ಮಹತ್ವದ ಸಭೆ- ಆರ್.ಆರ್.ನಗರದಲ್ಲಿ ಮುನಿರತ್ನ ಕೈಬಿಡಲು ನಿರ್ಧಾರ!

15842

 

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸ್ಥಾಪಿಸಲು ವಿಫಲವಾದ ಬೆನ್ನಲ್ಲೇ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ ಬುಧವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ತಡರಾತ್ರಿ ಬಿಜೆಪಿ ಹಾಗೂ ಕಾಂಗ್ರೆಸ್​ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮುಂಬರುವ ರಾಜಧಾನಿಯ ಎರಡು ಚುನಾವಣೆಗಳ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.

ad

ಜೆಡಿಎಸ್​​-ಕಾಂಗ್ರೆಸ್​ ಸಭೆಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ, ಜೆಡಿಎಸ್​ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸೇರಿ ಹಲವು ನಾಯಕರು ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಪ್ರಮುಖವಾಗಿ ಸೀಟುಗಳ ಹಂಚಿಕೆಯ ಬಗ್ಗೆ ಚರ್ಚೆ ನಡೆದಿದೆ. ಜಯನಗರ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿಯನ್ನು ಬೆಂಬಲಿಸಲು ಜೆಡಿಎಸ್​ ನಿರ್ಧರಿಸಿದೆ. ಇತ್ತೀಚಿಗಷ್ಟೇ ಜಯನಗರ ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ನಿಧನದಿಂದ ಈ ಕ್ಷೇತ್ರದ ಚುನಾವಣೆ ಮುಂದೂಡಲಾಗಿತ್ತು. ಇನ್ನು ಆರ್.ಆರ್.ನಗರದಿಂದ ಜೆಡಿಎಸ್​ ಅಭ್ಯರ್ಥಿಯಾಗಿರುವ ಜಿ.ಎಚ್.ರಾಮಚಂದ್ರ ಅವರನ್ನು ಬೇಷರತ್ತಾಗಿ ಬೆಂಬಲಿಸಲು ಕಾಂಗ್ರೆಸ್​ ನಿರ್ಧರಿಸಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮುನಿರತ್ನ ಮೇಲೆ ನಕಲಿ ಓಟರ್​ ಐಡಿ ಪ್ರಕರಣ ಕೇಳಿಬಂದಿದ್ದರಿಂದ ಆರ್.ಆರ್.ಚುನಾವಣೆಯನ್ನು ಮುಂದೂಡಲಾಗಿತ್ತು. ಇದೀಗ ಮುನಿರತ್ನರಿಂದ ಪಕ್ಷಕ್ಕೆ ಸಾಕಷ್ಟು ಮುಜುಗರವಾಗಿರೋದರಿಂದ ಮುನಿರತ್ನರನ್ನು ಕೈಬಿಟ್ಟು ಜೆಡಿಎಸ್​ಗೆ ಬೆಂಬಲಿಸಲು ಕಾಂಗ್ರೆಸ್​ ನಿರ್ಧರಿಸಿದೆ. ಒಟ್ಟಿನಲ್ಲಿ ಎರಡು ಪಕ್ಷಗಳು ಈಗಾಗಲೇ ರಣತಂತ್ರ ಆರಂಭಿಸಿದೆ.

Sponsored :

Related Articles