ಕೋಲಾರದಿಂದ ಲೋಕಸಭೆಗೆ ಬಿಜೆಪಿಯಿಂದ ಯಾರು ನಿಲ್ತಾರೆ? ಕುತೂಹಲಕರ ವಿಷಯ ಇಲ್ಲಿದೆ ನೋಡಿ

2048

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಒಂದು ಕ್ಷೇತ್ರವನ್ನು ಗೆಲ್ಲದೇ ಜಿಲ್ಲೆಯಲ್ಲಿ ಹೀನಾಯವಾಗಿ ಸೋತಿದ್ದ ಬಿಜೆಪಿ ಈಗ ಮುಂಬರುವ 2019ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ಭಾರಿ ಪೈಪೋಟಿ ನಡೆಯುತ್ತಿದೆ. ಸತತವಾಗಿ ಏಳು ಬಾರಿ ಕೋಲಾರ ಲೋಕಸಭಾ ಮೀಸಲು ಕ್ಷೇತ್ರದಿಂದ ಗೆದ್ದಿರುವ ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪ ವಿರುದ್ಧ ಸ್ಪರ್ಧಿಸಲು ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಸ್ ವೀರಯ್ಯ, ಬಿಜೆಪಿ ಮುಖಂಡರಾದ ಚಲವಾದಿ ನಾರಾಯಣಸ್ವಾಮಿ ಹಾಗೂ ಚಿ.ನಾ. ರಾಮು ಈ ಮೂವರು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದು ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.

  

ad

ಲೋಕಸಭಾ ಚುನಾವಣೆ ಹತ್ತು ತಿಂಗಳು ಬಾಕಿಯಿರುವಂತೆ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಪಡೆಯಲು ಬಾರಿ ಕಸರತ್ತು ನಡೆಸುತ್ತಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ತಳಮಟ್ಟದಲ್ಲಿ ಉಳಿದಿದೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆಗಿಂತ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದು ಕ್ಷೇತ್ರವನ್ನು ಗೆಲ್ಲದ ಬಿಜೆಪಿಗೆ ಈಗ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಿಂದ ದೂರ ಉಳಿದಿದ್ದ ನಾಯಕರು ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಾಗೆ ನೆನಪಾಗಿ ಎಲ್ಲಾರು ತಾ ಮುಂದು ನಾ ಮುಂದು ಅಂತಾ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.

ಇನ್ನು ಮೂವರು ಟಿಕೆಟ್ ಆಕಾಂಕ್ಷಿ ಅಭ್ಯಾರ್ಥಿಗಳಿಂದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಕಾರ್ಯ ಶುರುವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಫೈಪೋಟಿ ನಡೆದ್ರೆ. ಲೋಕಸಭಾ ಚುನಾವಣೆಯಲ್ಲಿ ಮಾತ್ರ ಕಾಂಗ್ರೆಸ್ ಬಿಜೆಪಿ ನಡುವೆ ಪೈಪೋಟಿಗೆ ಸಾಕ್ಷಿಯಾಗಬಹುದು ಕೋಲಾರ ಲೋಕಸಭಾ ಕ್ಷೇತ್ರ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ.

Sponsored :

Related Articles